ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ, ಎಲೆಕ್ಟ್ರಾನಿಕ್ಸ್ ಮಳಿಗೆಯೊಂದು ಭಸ್ಮವಾದ ಘಟನೆ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ನಡೆದಿದೆ.
ಚಿಕ್ಕಪೇಟೆಯ ಬಿ.ವಿ.ಕೆ. ಅಯ್ಯಂಗಾರ್ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಮಳಿಗೆಗೆ ಬೆಂಕಿ ತಗುಲಿದ್ದು, ಈ ಮಳಿಗೆಯಿದ್ದ ಕಟ್ಟಡದ ಜೊತೆಗೆ, ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಕಟ್ಟಡಕ್ಕೆ ವ್ಯಾಪಿಸಿದೆ. ಕಟ್ಟಡದ ಕೆಳ ಮಹಡಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ. ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿದ್ದ ವಸ್ತುಗಳು ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಅಪಾರ ಹಾನಿ ಸಂಭವಿಸಿದೆ.
ಸುದ್ದಿ ತಿಳಿದ ಕೂಡಲೇ, 10 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರಿಗೆ ಬೆಂಕಿ ತಗುಲಿ ಗಾಯಗಳಾಗಿವೆ ಎನ್ನಲಾಗಿದೆ.