ಪೇಶಾವರ: ಪಾಕಿಸ್ತಾನದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಆತ್ಮಾಹುತಿ ಬಾಂಬ್ ದಾಳಿ ನಡೆಸಿ, 23 ಮಂದಿಯನ್ನು ಹತ್ಯೆ ಮಾಡಿದ್ದಾರೆ.
ಪಾಕಿಸ್ತಾನದ ಪೇಶಾವರ ಸಮೀಪದ ಫತಾ ಎಂಬಲ್ಲಿ ಮಸೀದಿಯಲ್ಲಿ ಆತ್ಮಾಹುತಿ ದಾಳಿಕೋರರಿಬ್ಬರು, ತಮ್ಮನ್ನು ತಾವು ಸ್ಪೋಟಿಸಿಕೊಂಡಿದ್ದು, ಸ್ಥಳದಲ್ಲೇ ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ 25 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ. ತಾಲಿಬಾನ್ ಉಗ್ರರ ಕೈವಾಡ ಇರಬಹುದೆಂದು ಶಂಕಿಸಲಾಗಿದೆ.
ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುವ ಸಂದರ್ಭದಲ್ಲಿ ದಾಳಿಕೋರರು ಸ್ಪೋಟಿಸಿಕೊಂಡಿದ್ದು, ಸ್ಥಳಕ್ಕೆ ರಕ್ಷಣಾದಳದ ಸಿಬ್ಬಂದಿ, ವೈದ್ಯರು ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.