ಅಮೆರಿಕಾದ ಮ್ಯಾನ್ ಹಟ್ಟನ್ ನಲ್ಲಿ ಶನಿವಾರ ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ ಸ್ಪೋಟ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಪೋಟವಾಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ನೂರಾರು ಮಂದಿ ಆತಂಕದಿಂದ ಓಡಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿ ಸ್ಪೋಟಕ್ಕೆ ಬಳಸಿದ ಸಾಮಗ್ರಿಗಳ ಕುರುಹು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಮ್ಯಾನ್ ಹಟ್ಟನ್ 6 ನೇ ಅವೆನ್ಯೂವಿನ 23 ನೇ ಬೀದಿಯಲ್ಲಿ ಸ್ಪೋಟ ಸಂಭವಿಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಳು ಇನ್ನೂ ಲಭ್ಯವಾಗಬೇಕಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ನ್ಯೂಯಾರ್ಕ್ ಸಿಟಿ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.