ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಬಾರಾಮುಲ್ಲಾದ ಉರಿ ಸೆಕ್ಟರ್ ನಲ್ಲಿ ಆತ್ಮಾಹುತಿ ದಾಳಿ ನಡೆಸಿದ್ದಾರೆ.
12 ನೇ ಆರ್ಮಿ ಸೆಕ್ಟರ್ ಕೇಂದ್ರ ಕಚೇರಿಯೊಳಗೆ 3-4 ಮಂದಿ ಭಯೋತ್ಪಾದಕರು ಬೆಳಗಿನ ಜಾವ ನುಗ್ಗಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ 8 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಗಿನ ಜಾವ ಏಕಾಏಕಿ ನುಗ್ಗಿದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಸೇನಾ ಕಚೇರಿಯೊಳಗೆ 3 ಮಂದಿ ಭಯೋತ್ಪಾದಕರು ಅಡಗಿದ್ದು, ಅವರನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ದೆಹಲಿಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಕ್ಷಣಾ ಹಾಗೂ ಗೃಹ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.