ನವದೆಹಲಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ಸಮರ್ಥ ವಾದ ಮಂಡಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.
ಈಗಾಗಲೇ ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯಕ್ಕೆ ಮೇಲುಸ್ತುವಾರಿ ಸಮಿತಿ ಸಭೆ ಮಹತ್ವದ್ದಾಗಿದೆ. ರಾಜ್ಯದಲ್ಲಿ ಮಳೆ ಇಲ್ಲದ ಕಾರಣ, ಡ್ಯಾಂ ಗಳು ಭರ್ತಿಯಾಗಿಲ್ಲ. ಕೃಷಿ ಇರಲಿ, ಕುಡಿಯುವ ನೀರಿಗೂ ತೊಂದರೆಯಾಗಿದೆ ಎಂಬುದನ್ನು ಸಮಿತಿಗೆ ಮನವರಿಕೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಕುಡಿಯುವ ನೀರಿಗೆ ಬಳಸಿಕೊಳ್ಳಬೇಕಿದ್ದ ನೀರನ್ನೇ ತಮಿಳುನಾಡಿಗೆ ಕೃಷಿಗೆ ಹರಿಸಲಾಗಿದೆ ಎಂದು ಸಮಿತಿಗೆ ತಿಳಿಸಲಾಗುವುದು.
ತಮಿಳುನಾಡು ನೀರಾವರಿ ಪ್ರದೇಶವನ್ನು 3 ಪಟ್ಟು ಹೆಚ್ಚು ಮಾಡಿದೆ. ನಿಗದಿತ ನೀರನ್ನು ಹರಿಸಲು ಈಗ ಸಾಧ್ಯವೇ ಇಲ್ಲದ ಸ್ಥಿತಿ ಇದೆ ಎಂದು ಸಮಿತಿಗೆ ಮನವರಿಕೆ ಮಾಡಿಕೊಡಲು ಸರ್ಕಾರ ಮುಂದಾಗಿದೆ