ಬೆಂಗಳೂರು: ಕಾವೇರಿ ವಿಚಾರದಲ್ಲಿ ನ್ಯಾಯಾಂಗ ನಿಂದನೆಯ ಆತಂಕದಿಂದ ಸರ್ಕಾರ ಎಚ್ಚರಿಕೆಯ ನಡೆಯನ್ನಿಟ್ಟಿದೆ. ವಿಶೇಷ ಅಧಿವೇಶನದಲ್ಲಿ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಹೇಳದೇ, ಇರುವ ನೀರನ್ನು ಕುಡಿಯಲು ನಮಗೆ ಬಳಸಿಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.
ಶಾಸನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕರಡನ್ನು ರಾಷ್ಟ್ರಪತಿಗೆ ಕಳುಹಿಸಲಾಗುವುದು. ರಾಷ್ಟ್ರಪತಿಗಳು ಈ ಬಗ್ಗೆ ಸುಪ್ರೀಂ ಕೋರ್ಟ್ ಸಲಹೆ ಕೇಳಬಹುದಾಗಿದೆ. ಕುಡಿಯುವ ನೀರಿಗಾಗಿ ಕಾವೇರಿ ನದಿ ನೀರನ್ನು ಬಳಸಿಕೊಳ್ಳಬೇಕೆಂಬ ತೀರ್ಮಾನ ಕೈಗೊಂಡಿರುವುದರಿಂದ ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ನಿರ್ಣಯದ ಬಗ್ಗೆ ತಮಿಳುನಾಡು ಆಕ್ಷೇಪಿಸಿ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸುವ ಸಾಧ್ಯತೆ ಇದೆ.
ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರ ಹೆಜ್ಜೆ ಇಡಲು ಮುಂದಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸುವ ಜೊತೆಗೆ, ಕಾನೂನು ಹೋರಾಟ ಮುಂದುವರೆಸಲು ಚಿಂತಿಸಿದೆ ಎಂದು ಹೇಳಲಾಗಿದೆ.