ವಾಷಿಂಗ್ಟನ್: ಅಮೆರಿಕದಲ್ಲಿ ಮತ್ತೊಂದು ಫೈರಿಂಗ್ ನಡೆದಿದ್ದು, ಅಪರಿಚಿತರು ನಡೆಸಿದ ದಾಳಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ವಾಷಿಂಗ್ಟನ್ ನಿಂದ 67 ಕಿಲೋ ಮೀಟರ್ ದೂರದಲ್ಲಿರುವ ಬುರ್ಲಿಂಗ್ ಟನ್ ಸ್ಟೇಟ್ ಶಾಪಿಂಗ್ ಮಾಲ್ ನಲ್ಲಿ ಏಕಾಏಕಿ ನುಗ್ಗಿದ ಬಂದೂಕುಧಾರಿಯೊಬ್ಬ ಫೈರಿಂಗ್ ನಡೆಸಿದ್ದಾನೆ. ಮನಬಂದಂತೆ ಗುಂಡಿನ ದಾಳಿ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯ ಆರಂಭಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ದಾಳಿಕೋರನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಏಕಾಏಕಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.