ತಿರುವನಂತಪುರಂ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣ ಮಾಸುವ ಮೊದಲೇ, ಮತ್ತೊಂದು ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದೆ. ಅಟ್ಟಹಾಸ ಮೆರೆದಿರುವ ಕಾಮುಕನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಅಂಚುತೆಂಗು ಎಂಬಲ್ಲಿ 65 ವರ್ಷದ ವೃದ್ಧೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ವೃದ್ಧೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ, 29 ವರ್ಷದ ಅನಾಜ್ ಎಂಬ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಲಾಗಿತ್ತು.
ಅದಾದ ಬಳಿಕ ಮತ್ತೊಂದು ಪ್ರಕರಣ ನಡೆದಿದ್ದು, ಈ ಘಟನೆ ಹಸಿರಾಗಿರುವಾಗಲೇ, ಅಂಚುತೆಂಗು ಬಳಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಆರೋಪಿ ಅನಾಜ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ತಿರುವನಂತಪುರಂ ಎಸ್.ಪಿ.ಶಫೀನ್ ಅಹಮದ್ ತಿಳಿಸಿದ್ದಾರೆ.