ಬೆಳಗಾವಿ: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿ.ಸಿ.ಬಿ. ಪೊಲೀಸರು, ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮುಂಬೈ ಮೂಲದ ಪ್ರವೀಣ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ದಾಳಿಯ ಸಂದರ್ಭದಲ್ಲಿ ಮುಂಬೈ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ. ಬಂಧಿತ ಆರೋಪಿ ಮುಂಬೈನಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಬೆಳಗಾವಿಯ ಟಿಳಕವಾಡಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಪ್ರವೀಣ್, ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದ್ದಾರೆ.
ಮುಂಬೈನಿಂದ ಕೆಲಸ ಕೊಡಿಸುವುದಾಗಿ ಯುವತಿಯರನ್ನು ಕರೆತಂದು ಇಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಅಲ್ಲದೇ, ಕೆಲವು ಹೋಟೆಲ್ ಗಳಿಗೆ ಯುವತಿಯರನ್ನು ಕಳುಹಿಸಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.