ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ ಜಾರ್ಜ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಜುಲೈ 18 ರಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಹಿಂದೆ ನಿರ್ವಹಿಸುತ್ತಿದ್ದ ಖಾತೆಯ ಜವಾಬ್ದಾರಿಯನ್ನೇ ಜಾರ್ಜ್ ನಿರ್ವಹಿಸಲಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿ.ಐ.ಡಿ. ಕ್ಲೀನ್ ಚಿಟ್ ನೀಡಿದ್ದರಿಂದ ಜಾರ್ಜ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಅದರಂತೆ ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.