ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.
ಸುಪ್ರೀಂ ಕೋರ್ಟ್ ನೀಡಲಿರುವ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ, ಬೆಂಗಳೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್, ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂದು ಆದೇಶ ನೀಡಿದ ನಂತರದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು.
ಹಿಂದಿನ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ, ಬೆಂಗಳೂರು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಸೇರಿದಂತೆ, ಕೆಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.