ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಆದೇಶ ನೀಡಿದೆ. ನಾಳೆ ಮತ್ತು ನಾಡಿದ್ದು 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ನಿಮ್ಮ ನಿರ್ಣಯ ಏನೇ ಇರಲಿ, ಆದೇಶ ಪಾಲಿಸಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಇದಕ್ಕೂ ಮುನ್ನ ಎರಡೂ ರಾಜ್ಯಗಳ ವಾದ- ವಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಎರಡು ದಿನಗಳ ಕಾಲ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿತ್ತು. ಜೊತೆಗೆ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತ್ತು. ಆದ್ರೆ ಸುಪ್ರೀಂ ಆದೇಶ ನೀಡ್ತಾ ಇದ್ದಂತೆ ಕರ್ನಾಟಕ ಪರ ವಕೀಲ ನಾರಿಮನ್,ನೀರು ಬಿಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ರು. ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲ. ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ. ವಿಧಾನ ಮಂಡಲ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದವರು ವಾದ ಮಂಡಿಸಿದ್ರು.
ಆದ್ರೆ ಇದಕ್ಕೆ ಪ್ರತ್ಯುತ್ತರವಾಗಿ ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿದೆ. ನಿಮ್ಮ ನಿರ್ಣಯ ಏನೇ ಇರಲಿ ಎರಡು ದಿನ ನೀರು ಬಿಡಿ ಎಂದು ಸೂಚಿಸಿದೆ. ಸೆಪ್ಟೆಂಬರ್ 30 ರಂದು ಮಧ್ಯಾಹ್ನ 2 ಗಂಟೆಗೆ ಮತ್ತೆ ವಿಚಾರಣೆ ನಡೆಯಲಿದೆ.