ಚೆನ್ನೈ: ತಮಿಳುನಾಡಿಗೆ 3 ದಿನಗಳಲ್ಲಿ 18,000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಯಲ್ಲೇ ಸಭೆ ನಡೆಸಿದ್ದಾರೆ. ಜ್ವರ, ಡಿ ಹೈಡ್ರೇಷನ್ ನಿಂದ ಬಳಲುತ್ತಿರುವ ಜಯಲಲಿತಾ ಅವರು, ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸಂಜೆ 4.30 ರಿಂದ 6.30 ರ ವರೆಗೆ ತಮಿಳುನಾಡಿನ ಉನ್ನತ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ.
ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ, ಕರ್ನಾಟಕ ಸಲ್ಲಿಸಿರುವ ಮಾರ್ಪಾಡು ಅರ್ಜಿ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.