ನವದೆಹಲಿ: ತೈಲ ಬೆಲೆಯನ್ನು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 28 ಪೈಸೆ ಏರಿಕೆಯಾಗಿದೆ.
ಅದೇ ರೀತಿ ಡೀಸೆಲ್ ಬೆಲೆಯನ್ನೂ ಪರಿಷ್ಕರಿಸಿದ್ದು, ಡೀಸೆಲ್ ಬೆಲೆ ಲೀಟರ್ ಗೆ 6 ಪೈಸೆ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದ್ದರೆ, ಡೀಸೆಲ್ ಬೆಲೆ ಇಳಿಕೆಯಾಗಿದೆ.
ಪೆಟ್ರೋಲ್ ಬೆಲೆ ಲೀಟರ್ ಗೆ 28 ಪೈಸೆ ಏರಿಕೆಯಾಗಿದ್ದು, ಡೀಸೆಲ್ 6 ಪೈಸೆ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.