ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ನಾಡೋಜ ಚೆನ್ನವೀರ ಕಣವಿಯವರು ಇಂದಿನಿಂದ ಅಕ್ಟೋಬರ್ 11 ರ ವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರು, ದಸರಾ ಮಹೋತ್ಸವಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದರೊಂದಿಗೆ ಕಣವಿಯವರು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರುಣಾ ಕೆರೆಯಲ್ಲಿ ಸಾಹಸ ಕ್ರೀಡೋತ್ಸವ ಏರ್ಪಡಿಸಿದ್ದು, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ.
ಕಲಾಮಂದಿರದಲ್ಲಿ ಚಲನ ಚಿತ್ರೋತ್ಸವ, ಜೆ.ಕೆ. ಮೈದಾನದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ, ಮಹಿಳಾ ದಸರಾ, ಪುಸ್ತಕ ಮೇಳ, ಸ್ಕೌಟ್ ಅಂಡ್ ಗೈಡ್ ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ.