ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್ ಗಳ ಪಂದ್ಯದ ನಾಯಕ, ಮಹೇಂದ್ರ ಸಿಂಗ್ ಧೋನಿ ಅವರ ಜೀವನಾಧಾರಿತ ‘ಎಂ.ಎಸ್.ಧೋನಿ-ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರ ಗಳಿಕೆಯಲ್ಲಿ ದಾಖಲೆ ಬರೆದಿದೆ.
ಆತ್ಮಕತೆ ಆಧಾರಿತ ಚಿತ್ರಗಳಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಇದಾಗಿದೆ. ಅಲ್ಲದೇ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರಗಳಲ್ಲಿಯೇ ಭರ್ಜರಿ ಓಪನಿಂಗ್ ಕಂಡ ಚಿತ್ರ ಎಂಬ ಹೆಗ್ಗಳಿಕೆ ಪಡೆದಿದೆ. ‘ಎಂ.ಎಸ್.ಧೋನಿ-ದಿ ಅನ್ ಟೋಲ್ಡ್ ಸ್ಟೋರಿ’ ಮೊದಲ ದಿನ 21.30 ಕೋಟಿ ರೂ. ಕಲೆಕ್ಷನ್ ಮಾಡಿದ್ದು, 3 ದಿನಗಳಲ್ಲಿ 64 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದಿದೆ.
ಮಹೇಂದ್ರ ಸಿಂಗ್ ಧೋನಿ ಪಾತ್ರದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಟಿಸಿದ್ದು, ನೀರಜ್ ಪಾಂಡೆ ನಿರ್ದೇಶನ ಮಾಡಿದ್ದಾರೆ. ಸುಮಾರು 4500 ಸೆಂಟರ್ ಗಳಲ್ಲಿ ತೆರೆ ಕಂಡಿರುವ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ.