ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ. ಈಗಿನಿಂದಲೇ ಕಾರ್ಯತಂತ್ರ ರೂಪಿಸಿದೆ.
ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆಯುತ್ತಿರುವ ರಾಜ್ಯ ಬಿ.ಜೆ.ಪಿ. ಕಾರ್ಯಕಾರಣಿಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ. ಈ ಕುರಿತಂತೆ ಮಾತನಾಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ರಾಜ್ಯದ ಜ್ವಲಂತ ಸಮಸ್ಯೆಗಳ ಬಗೆಹರಿಸಲು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ತೀರ್ಮಾನದ ಕುರಿತಾಗಿ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.