ಹರಿಯಾಣದಲ್ಲಿ ಈ ಹಿಂದಿನ ಭೂಪಿಂದರ್ ಸಿಂಗ್ ಹೂಡಾ ಸರ್ಕಾರವನ್ನು ಶ್ಲಾಘಿಸಿದ್ದಕ್ಕೆ ಮಹಿಳಾ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಹಾಲಿ ಬಿಜೆಪಿ ಸರ್ಕಾರಕ್ಕಿಂತ್ಲೂ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹೂಡಿಕೆ ಮತ್ತು ಉದ್ಯೋಗಾವಕಾಶಗಳಿಗೆ ಹೆಚ್ಚಿನ ಆದ್ಯತೆ ನೀಡಿತ್ತು ಎಂಬ ಮಾಹಿತಿಯನ್ನು ಅವರು ಆರ್ ಟಿ ಐ ಮೂಲಕ ನೀಡಿದ್ದರು.
ಈ ಕಾರಣಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೂಪರಿಂಟೆಂಡೆಂಟ್ ಸುನೀತಾ ದೇವಿ ಅವರನ್ನು ಅಮಾನತ್ತಿನಲ್ಲಿಡಲಾಗಿದೆ. ಅಷ್ಟೇ ಅಲ್ಲ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಅವರ ಮೇಲಿದ್ದು, ಚಾರ್ಜ್ ಶೀಟ್ ಕೂಡ ದಾಖಲಿಸಲಾಗುತ್ತಿದೆ.
ಇನ್ನು ಕೆಲವು ಮೂಲಗಳ ಪ್ರಕಾರ ಮನೋಹರ್ ಲಾಲ್ ಕಟ್ಟರ್ ಸರ್ಕಾರದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಪ್ರಯತ್ನ ನಡೆದಿದ್ದು, ಅದಕ್ಕಾಗಿಯೇ ಬೋಗಸ್ ಮಾಹಿತಿಗಳನ್ನು ಒದಗಿಸಲಾಗುತ್ತಿದೆ ಎನ್ನಲಾಗ್ತಾ ಇದೆ. ತನಿಖೆಯ ನಂತರವಷ್ಟೆ ಈ ಬಗ್ಗೆ ಸತ್ಯಾಸತ್ಯತೆ ಬಯಲಾಗಬೇಕಿದೆ.