ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ.57.02 ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಕೊಡಗು ಜಿಲ್ಲೆ ತೃತೀಯ ಸ್ಥಾನ ಗಳಿಸಿವೆ.
ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 64.5 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಶೇ. 3 ರಷ್ಟು ಇಳಿಕೆಯಾಗಿದೆ.
ಫಲಿತಾಂಶ ಪ್ರಕಟಿಸಿದ ಸಚಿವ ಕಿಮ್ಮನೆ ರತ್ನಾಕರ್, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರಲ್ಲದೇ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎದೆಗುಂದದೆ ಮುಂದಿನ ಪರೀಕ್ಷೆಗೆ ಈಗಿನಿಂದಲೇ ಸಿದ್ದತೆ ನಡೆಸುವಂತೆ ಮನವಿ ಮಾಡಿದರು. ಈ ಬಾರಿಯ ಪರೀಕ್ಷೆಯಲ್ಲಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡು ಬಾರಿ ಬಹಿರಂಗಗೊಂಡ ಕಾರಣ ಗೊಂದಲ ಉಂಟಾಗಿತ್ತು. ಫಲಿತಾಂಶಕ್ಕಾಗಿ, www.karresult.nic.in ಹಾಗೂ www.puc,kar.nic.in ಜಾಲತಾಣಗಳನ್ನು ವೀಕ್ಷಿಸಬಹುದು. ಕಳೆದ ಬಾರಿ ಗೊಂದಲ ಉಂಟಾಗಿದ್ದ ಕಾರಣ, ಖಾಸಗಿ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗುವುದಿಲ್ಲ.