ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಸೂಚನೆ ಅನ್ವಯ, ಉನ್ನತ ಮಟ್ಟದ ತಾಂತ್ರಿಕ ತಂಡ ಇಂದಿನಿಂದ ಅಧ್ಯಯನ ಪ್ರವಾಸ ಕೈಗೊಂಡಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡ ಸಭೆ ನಡೆಸಲಿದೆ. ರಾಜ್ಯದ ಅಧಿಕಾರಿಗಳು ಕಾವೇರಿ ಜಲಾಶಯಗಳಲ್ಲಿರುವ ನೀರಿನ ಸಂಗ್ರಹದ ಬಗ್ಗೆ ಮಾಹಿತಿ ನೀಡಲಿದ್ದು, ಅಲ್ಲಿಂದ ಮಂಡ್ಯ ಜೆಲ್ಲೆಗೆ ತಂಡ ತೆರಳಲಿದೆ. ಜಲಾಶಯಗಳಲ್ಲಿರುವ ನೀರಿನ ಸಂಗ್ರಹ ಮತ್ತು ಇತರೆ ಮಾಹಿತಿಗಳನ್ನು ಸಂಗ್ರಹಿಸಲಿದೆ.
ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಗಳ ವೀಕ್ಷಣೆ ನಡೆಸಲಿರುವ ತಂಡ, ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲಿದೆ.
ಈ ತಂಡದಲ್ಲಿ ಕೇಂದ್ರ ಜಲ ಆಯೋಗದ ಅಧಿಕಾರಿಗಳು, ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿಯ ಅಧಿಕಾರಿಗಳು ಇದ್ದು, ವರದಿ ಸಿದ್ಧಪಡಿಸಿ, ಅಕ್ಟೋಬರ್ 17 ರಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಿದೆ.