ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಫೇಸ್ ಬುಕ್ ಮತ್ತು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಾಮಕ್ಕಲ್ ಜಿಲ್ಲೆಯ ರುಚೆಂಗೋಡಿನಲ್ಲಿ ಟೆಕ್ಕಿ ಸತೀಶ್ ಕುಮಾರ್, ಮಧುರೈನಲ್ಲಿ ಎ.ಸಿ. ಮೆಕಾನಿಕ್ ಮಾಡಸ್ವಾಮಿ ಅವರನ್ನು ಚೆನ್ನೈ ಸೈಬರ್ ಕ್ರೈ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
ಇದುವರೆಗೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಿದ ಕುರಿತಾಗಿ, 52 ಕೇಸ್ ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಎಸ್. ಜಾರ್ಜ್ ಹೇಳಿಕೆ ನೀಡಿದ್ದಾರೆ.