ಗೋವಾ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗೋವಾದಲ್ಲಿ ‘ಬ್ರಿಕ್ಸ್’ ರಾಷ್ಟಗಳ ಶೃಂಗಸಭೆ ನಡೆಯಲಿದ್ದು, ಬಿಗಿಭದ್ರತೆ ಕೈಗೊಳ್ಳಲಾಗಿದೆ.
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಭೆಯಲ್ಲಿ ಪಾಕಿಸ್ತಾನದ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಗಳ ಬಗ್ಗೆ, ಇದರಿಂದ ದಕ್ಷಿಣ ಏಷ್ಯಾ ಭದ್ರತೆಗೆ ಎದುರಾಗಿರುವ ಅಪಾಯದ ಕುರಿತಾಗಿ ಚರ್ಚೆ ನಡೆಯಲಿದೆ. ಅಲ್ಲದೇ, ಈ ವೇದಿಕೆಯನ್ನು ಬಳಸಿಕೊಂಡು ವಿಶ್ವ ಸಮುದಾಯದ ಎದುರು ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ಭಾರತ ಯೋಜಿಸಿದೆ.
‘ಬ್ರಿಕ್ಸ್’ ರಾಷ್ಟ್ರಗಳ ಮುಖ್ಯಸ್ಥರ ನಡುವೆ ದ್ವಿಪಕ್ಷೀಯ ಮಾತುಕತೆ, ಒಪ್ಪಂದಗಳು ನಡೆಯಲಿವೆ. ಸದಸ್ಯ ರಾಷ್ಟ್ರಗಳ ಆರ್ಥಿಕತೆ, ಪ್ರವಾಸೋದ್ಯಮ, ಶಿಕ್ಷಣ, ಕ್ರೀಡೆ, ರಕ್ಷಣೆ ಮೊದಲಾದ ವಿಷಯಗಳ ಕುರಿತಾಗಿ ಸಹಕಾರ ನೀಡುವ ಕುರಿತು ಸಮಾಲೋಚನೆ ನಡೆಸಲಾಗುವುದು.
ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿನ್ ಪಿಂಗ್, ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್ ದೇಶಗಳ ಮುಖ್ಯಸ್ಥರು ಪಾಲ್ಗೊಳ್ಳಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.