ಖ್ಯಾತ ಕಿರು ತೆರೆ ನಟಿಯೊಬ್ಬರು ತಮ್ಮ 7 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಪರಸ್ಪರ ಒಪ್ಪಿಗೆ ಮೇರೆಗೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆಯಾಗಲಿದೆ ಎನ್ನಲಾಗಿದೆ.
ಬಾಲಿವುಡ್ ಚಿತ್ರ ನಟಿ ಹಾಗೂ ಕಪಿಲ್ ಶರ್ಮಾ ಅವರ ಕಾಮಿಡಿ ಷೋ ನಲ್ಲಿ ಪ್ರಮುಖ ಪಾತ್ರಧಾರಿಯಾಗಿರುವ ಉಪಾಸನಾ ಸಿಂಗ್, ತಮ್ಮ ಪತಿ ನೀರಜ್ ಭಾರದ್ವಾಜ್ ರಿಂದ ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ. 2009 ರಲ್ಲಿ ಇವರಿಬ್ಬರ ವಿವಾಹ ನೆರವೇರಿದ್ದು, ನೀರಜ್ ಭಾರದ್ವಾಜ್ ಕೂಡಾ ಕಿರು ತೆರೆ ನಟ.
ಕಳೆದ ನಾಲ್ಕು ವರ್ಷಗಳಿಂದಲೂ ದಂಪತಿಗಳು ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಈಗ ಅಧಿಕೃತವಾಗಿ ಬೇರೆಯಾಗುತ್ತಿದ್ದಾರೆ ಎನ್ನಲಾಗಿದೆ. ನೀರಜ್ ಭಾರದ್ವಾಜ್ ಈ ವಿಚಾರವನ್ನು ಖಚಿತಪಡಿಸಿದ್ದು, ದೀಪಾವಳಿ ಬಳಿಕ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಆದರೆ ಉಪಾಸನಾ ಸಿಂಗ್ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.