ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಘ ಪರಿವಾರದ ನಾಯಕರ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿದ್ದ ಶಾಲಾ ಶಿಕ್ಷಕನೊಬ್ಬ ಈಗ ಜೈಲು ಪಾಲಾಗಿದ್ದಾನೆ.
ಮೀರತ್ ನ ಸರ್ದಾನಾ ಏರಿಯಾದಲ್ಲಿರುವ ಖಾಸಗಿ ಶಾಲೆಯೊಂದರ ಪ್ರಾಂಶುಪಾಲನಾಗಿದ್ದ ಮುದಸ್ಸೀರ್ ರಾಣಾ ಎಂಬಾತ, ದಸರಾ ಹಬ್ಬದ ಸಂದರ್ಭದಲ್ಲಿ ಈ ಪೋಸ್ಟ್ ಹಾಕಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ, ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಸಂಘ ಪರಿವಾರದ ನಾಯಕರು, ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಅವರನ್ನು ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ ಅವಹೇಳನಾಕಾರಿಯಾಗಿ ಚಿತ್ರಿಸಿದ್ದು, ಗುರುವಾರದಂದು ಆತನನ್ನು ಬಂಧಿಸಿರುವ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.