ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಕಾಲ್ತುಳಿತ ಸಂಭವಿಸಿದ ಕಾರಣ 12 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಜೈ ಗುರುದೇವ್ ಸಮಾಗಮ ಕಾರ್ಯಕ್ರಮ ವಾರಣಾಸಿಯಲ್ಲಿ ನಡೆಯುತ್ತಿದ್ದು, ರಾಜ್ ಘಾಟ್ ಸೇತುವೆ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಿಕೊಂಡಿದ್ದ ವೇಳೆ ಉಂಟಾದ ನೂಕುನುಗ್ಗಲಿನ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿರುವ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.