ಬೆಳಗಾವಿ: ಮಹಾದಾಯಿ ಯೋಜನೆ ಕುರಿತಾಗಿ, ಕಣಕುಂಬಿಯಲ್ಲಿ ಹೋರಾಟ ನಡೆಸುತ್ತಿದ್ದ ಕನ್ನಡ ಸಂಘಟನೆಗಳ ಒಕ್ಕೂಟದ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ, ಮಲಪ್ರಭಾ ನದಿಯ ಉಗಮ ಸ್ಥಾನವಾಗಿರುವ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಹೋರಾಟ ನಡೆಸಲಾಗಿದೆ. ರಸ್ತೆ ತಡೆದು ಹೋರಾಟ ಮಾಡುತ್ತಿದ್ದ ಕನ್ನಡ ಒಕ್ಕೂಟದ ಸದಸ್ಯರಿಗೆ ಪೊಲೀಸರು ಮನವೊಲಿಸಲು ಮುಂದಾಗಿದ್ದಾರೆ.
ಆದರೆ, ಇದಕ್ಕೆ ಒಪ್ಪದೇ, ಪ್ರತಿಭಟನೆ ನಡೆಸಲು ಮುಂದಾದ ಸಂದರ್ಭದಲ್ಲಿ ಪ್ರಮುಖರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ಶಿವರಾಮೇಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್. ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.