ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳವಾಗಿದೆ.
ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ, ಗಾಯದ ಮೇಲೆ ಬರೆ ಎಳೆದಂತೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 1.34 ರೂ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 2.37 ರೂಪಾಯಿ ಹೆಚ್ಚಳವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆಯಲ್ಲಿ ಏರಿಕೆಯಾದ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಹೆಚ್ಚಳವಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಯನ್ನು ಆಧರಿಸಿ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್ ಲೀಟರ್ ಗೆ 1.34 ರೂ,, ಡೀಸೆಲ್ ಲೀಟರ್ ಗೆ 2.37 ರೂ. ಏರಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.