ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗದಲ್ಲಿ ಮೀಸಲು ಒದಗಿಸಲು ಮತ್ತು ಈಗಿರುವ ಮೀಸಲು ಪ್ರಮಾಣ ಶೇ.50 ಕ್ಕಿಂತ ಹೆಚ್ಚಿಸಲು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಅವರು, ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಪರಿಶಿಷ್ಟರ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನ ಸದ್ಬಳಕೆ ಆಗಬೇಕಾದರೆ ತಾಲೂಕು ಮಟ್ಟದಲ್ಲಿ ಕಚೇರಿ ಮತ್ತು ಅಧಿಕಾರಿಗಳು ಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು. ವಾಲ್ಮೀಕಿ ಸಮುದಾಯದ ಮಠ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ 5 ಕೋಟಿ ರೂ. ನೀಡಲಾಗುವುದು ಎಂದೂ ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಘೋಷಿಸಿದರು.