Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವು

$
0
0
ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವು

ಮಡಿಕೇರಿ: ತಡೆಗೋಡೆಗೆ ಡಿಕ್ಕಿಯಾದ ಕಾರ್ ಪಲ್ಟಿಯಾಗಿ ಬಿದ್ದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರ ಪೇಟೆ ತಾಲ್ಲೂಕಿನ ಬಸವನಹಳ್ಳಿಯ ಸಮೀಪ, ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೈಸೂರು ಜಿಲ್ಲೆ ಕೆ.ಜಿ. ಕೊಪ್ಪಲಿನ ಮೂವರು ಮೃತಪಟ್ಟಿದ್ದಾರೆ. ಚಂದ್ರು (19), ನಂದೀಶ್(18), ಚೇತನ್(19) ಅವರು ಸ್ಥಳದಲ್ಲೇ ಮೃತಪಟ್ಟವರು. ಕಾರಿನಲ್ಲಿದ್ದ ಸುಹಾಸ್, ಪ್ರತಾಪ್, ಶಿವಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಮಡಿಕೇರಿ ಪ್ರವಾಸಕ್ಕೆ ತೆರಳಿದ್ದ 6 ಮಂದಿ ತಡರಾತ್ರಿ ಮೈಸೂರಿಗೆ ವಾಪಸ್ ಆಗುತ್ತಿದ್ದರು. ಬಸವನಹಳ್ಳಿ ಬಳಿ ವೇಗವಾಗಿದ್ದ ಕಾರ್, ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಶಾಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>