ನವದೆಹಲಿ: ಕಾವೇರಿ ಕಣಿವೆಯಲ್ಲಿ ಪ್ರವಾಸ ಕೈಗೊಂಡು, ಪರಿಶೀಲನೆ ನಡೆಸಿದ್ದ ಕೇಂದ್ರ ಉನ್ನತಾಧಿಕಾರ ತಾಂತ್ರಿಕ ಸಮಿತಿ, ಅಧ್ಯಯನ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯುವ ವಿಚಾರಣೆ ಕುತೂಹಲ ಮೂಡಿಸಿದೆ. ಕಾವೇರಿ ನ್ಯಾಯಾಧೀಕರಣ ತೀರ್ಪನ್ನು ಪ್ರಶ್ನಿಸಿ, ಕರ್ನಾಟಕ ಸಲ್ಲಿಸಿರುವ ಅರ್ಜಿಯ ನಿರ್ಣಾಯಕ ವಿಚಾರಣೆ ನ್ಯಾ.ದೀಪಕ್ ಮಿಶ್ರಾ, ನ್ಯಾ. ಅಮಿತ್ ರಾಯ್, ನ್ಯಾ. ಎ.ಎಂ. ಖಾನ್ವಿಲ್ಕರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿ ಸದಸ್ಯ ಪೀಠದಲ್ಲಿ ನಡೆಯಲಿದೆ.
ತಮಿಳುನಾಡಿಗೆ ಹಂಚಿಕೆ ಮಾಡಿರುವ ನೀರಿನ ಪ್ರಮಾಣ ಕಡಿಮೆ ಮಾಡಬೇಕು. ಕರ್ನಾಟಕಕ್ಕೆ ಹೆಚ್ಚು ನೀರು ಹಂಚಿಕೆ ಮಾಡಬೇಕು. ನೀರು ನಿರ್ವಹಣಾ ಮಂಡಳಿ, ನಿಯಂತ್ರಣ ಸಮಿತಿ ರಚನೆ ಮಾಡಬಾರದೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ. ನೀರು ಹಂಚಿಕೆಯಲ್ಲಿ ಬೆಂಗಳೂರು ಜನಸಂಖ್ಯೆ ಪರಿಗಣಿಸಬೇಕೆಂದು ಕೋರಲಾಗಿದೆ. ವಿಚಾರಣೆ ಇಂದು ನಡೆಯಲಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಹೋಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.