ಸ್ಟಾರ್ ನಟ, ನಟಿಯರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ತಮ್ಮ ಇಷ್ಟದ ಕಲಾವಿದರಿಗೆ ದೇವಾಲಯ ನಿರ್ಮಿಸಿ ಆರಾಧಿಸುವ ಅಭಿಮಾನಿಗಳಿದ್ದಾರೆ.
ನಟರ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು, ಅವರ ಫೋಟೋಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದನ್ನು ಸಾಮಾನ್ಯವಾಗಿ ಅಭಿಮಾನಿಗಳು ಮಾಡುತ್ತಾರೆ. ಆದರೆ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬಗ್ಗನಾಡು ಗ್ರಾಮದ ಅಭಿಮಾನಿಗಳ ಅಭಿಮಾನ ಉಕ್ಕಿ ಹರಿಯುವಂತಿದೆ. ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಬಹುಭಾಷಾ ನಟ ಕಿಚ್ಚ ಸುದೀಪ್ ಅಭಿಮಾನಿಗಳಾಗಿದ್ದಾರೆ.
ಈ ಗ್ರಾಮದಲ್ಲಿ ಸುಮಾರು 500 ಮನೆಗಳಿದ್ದು, ಬಹುತೇಕರ ಮನೆಗಳಲ್ಲಿ ಸುದೀಪ್ ಭಾವಚಿತ್ರಕ್ಕೆ ಪೂಜೆ ನೆರವೇರಿಸುತ್ತಾರೆ. ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿನ ಯುವಕರು ಸೇವಾಕಾರ್ಯಗಳನ್ನು ಕೈಗೊಳ್ಳುತ್ತಾರೆ. ಅವರ ಚಿತ್ರಗಳು ಬಿಡುಗಡೆಯಾದ ಸಂದರ್ಭದಲ್ಲಿ ಸಂಭ್ರಮಿಸುತ್ತಾರೆ.
ಹಬ್ಬ ಹರಿದಿನಗಳಲ್ಲಿ ಸುದೀಪ್ ಫ್ಲೆಕ್ಸ್, ಕಟೌಟ್ ಹಾಕುತ್ತಾರೆ. ತಮ್ಮ ಗ್ರಾಮಕ್ಕೆ ಸುದೀಪ್ ಒಮ್ಮೆ ಬರಲಿ ಎಂಬುದು ಅವರ ಅಭಿಮಾನಿಗಳ ಆಸೆಯಾಗಿದೆ. ಅಂದ ಹಾಗೇ ಯುವ ಅಭಿಮಾನಿಗಳ ಸಂಭ್ರಮಕ್ಕೆ ಪೋಷಕರು ಕೂಡ ಸಾಥ್ ನೀಡಿದ್ದಾರೆ.