ಮಂಡ್ಯ: ಕಾವೇರಿ ನದಿ ನೀರಿನ ವಿಚಾರವಾಗಿ ಹೋರಾಟ ನಡೆಸಿ, ಜೈಲು ಸೇರಿದ್ದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಂಡ್ಯ ಜಿಲ್ಲೆ ಹಾರೋಹಳ್ಳಿಯ 28 ವರ್ಷದ ಅರುಣ್ ಆತ್ಮಹತ್ಯೆಗೆ ಯತ್ನಿಸಿದವರು. ಮಂಡ್ಯ ಜೈಲಿನಲ್ಲಿದ್ದ ಅರುಣ್, ಮಾತ್ರೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಮಂಡ್ಯದಲ್ಲಿ ನಡೆದ ಹೋರಾಟದಲ್ಲಿ ಅವರು ಪಾಲ್ಗೊಂಡಿದ್ದರು.
ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಿ ಮಂಡ್ಯ ಜೈಲಿಗೆ ಕಳುಹಿಸಲಾಗಿದ್ದು, ಅವರು ಜೈಲಿನಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.