ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ. ಯಶ್, ರಾಧಿಕಾ ಪಂಡಿತ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಅಕ್ಟೋಬರ್ 28 ರಂದು ಬಿಡುಗಡೆಯಾಗಲಿದೆ.
‘ಮಾಸ್ಟರ್ ಪೀಸ್’ ಬಳಿಕ ಅಭಿಮಾನಿಗಳು ಭಾರೀ ನಿರೀಕ್ಷೆಯಿಂದ ಕಾಯುತ್ತಿದ್ದ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದು, ಹಾಡುಗಳು ಈಗಾಗಲೇ ಮೋಡಿ ಮಾಡಿವೆ. ಆಡಿಯೋ ಕೇಳಿದ ಬಳಿಕ ಸಿನಿಮಾ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಕೆ. ಮಂಜು ನಿರ್ಮಾಣ ಮಾಡಿರುವ ಚಿತ್ರವನ್ನು ಮಹೇಶ್ ರಾವ್ ನಿರ್ದೇಶಿಸಿದ್ದಾರೆ. ಯಶ್, ರಾಧಿಕಾ ಪಂಡಿತ್ ಜೊತೆಯಾಗಿ ಅಭಿನಯಿಸಿರುವ 4 ನೇ ಚಿತ್ರ ಇದಾಗಿದೆ.
ಆರಂಭದಿಂದಲೂ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಭಾರೀ ನಿರೀಕ್ಷೆ ಮೂಡಿಸಿದೆ. ಅಕ್ಟೋಬರ್ 28 ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಯಶ್ ಅಭಿಮಾನಿಗಳ ದೀಪಾವಳಿ ಸಂಭ್ರಮ ಇಮ್ಮಡಿಸಲಿದೆ.