ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ, ಕೆಸ್ತೂರು ಗ್ರಾಮ ಪಂಚಾಯಿತಿ ಕಾಮುಕ ಅಧ್ಯಕ್ಷನ ವರ್ತನೆಗೆ, ಟ್ವಿಟರ್ ನಲ್ಲಿ ಮಾಜಿ ಸಂಸದೆ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆಘಾತಕಾರಿ ಘಟನೆ ಎಂದು ಹೇಳಿದ್ದಾರೆ.
ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ, ಕಚೇರಿಯಲ್ಲಿ ವಿಧವೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮಹಿಳೆ ದೂರು ನೀಡಿದ ಬಳಿಕ, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಾಮುಕ ಅಧ್ಯಕ್ಷನ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಆತನನ್ನು ಪಂಚಾಯಿತಿ ಸದಸ್ಯತ್ವದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಲಾಗಿದೆ.
ಈ ನಡುವೆ, ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ಪಂಚಾಯಿತಿಯಲ್ಲಿ ಕೆಲಸ ಮಾಡುವ ಮಹಿಳೆ ಮೇಲೆ, ಅತ್ಯಾಚಾರ ಯತ್ನ ನಡೆದಿರುವುದು ಆಘಾತಕಾರಿ ಸಂಗತಿ. ದೌರ್ಜನ್ಯದ ವಿರುದ್ಧ ನಾವೆಲ್ಲಾ ಎದ್ದು ನಿಲ್ಲಬೇಕಿದೆ ಎಂದು ಹೇಳಿದ್ದಾರೆ.