ಬೆಂಗಳೂರು: ಕಿಕ್ ಬ್ಯಾಕ್ ಪ್ರಕರಣದಲ್ಲಿ ಆರೋಪಿತರಾಗಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ದೋಷಮುಕ್ತರಾಗಿ ನ್ಯಾಯಾಲಯದಿಂದ ಹೊರಬಂದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯವಾಗಿ ನನಗೆ ಇದು ಮಹತ್ವದ ತೀರ್ಪು ಎಂದು ಹೇಳಿದ್ದಾರೆ. ರಾಜಕೀಯ ಪಿತೂರಿಯಿಂದ ಆರೋಪಿತನಾಗಿದ್ದ ನನಗೆ ಇಂದು ಕೋರ್ಟ್ ನೀಡಿರುವ ತೀರ್ಪಿನಿಂದ ಸಂತಸವಾಗಿದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. ಇದು ಲಕ್ಷಾಂತರ ಬೆಂಬಲಿಗರಲ್ಲಿ ಸಂತಸ ತಂದಿದೆ ಎಂದು ಹೇಳಿದ್ದಾರೆ.
ಮುಂದೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುತ್ತೇನೆ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸುತ್ತೇನೆ. ತೀರ್ಪಿನಿಂದ ನನಗೆ ಸಂತಸವಾಗಿದೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಯಡಿಯೂರಪ್ಪ ‘ಸತ್ಯಮೇವ ಜಯತೇ’ ಎಂದು ಟ್ವೀಟ್ ಮಾಡಿದ್ದಾರೆ.