ರಾಯಚೂರು: ತನ್ನೊಂದಿಗೆ ಅನೈತಿಕ ಸಂಬಂಧ ಬೆಳೆಸುವಂತೆ, ಕಾಮುಕನೊಬ್ಬ ಕಿರುಕುಳ ನೀಡಿದ್ದರಿಂದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ 16 ವರ್ಷದ ಬಾಲಕಿಗೆ, ಅದೇ ಗ್ರಾಮದ ಕಿರಾತಕನೊಬ್ಬ ನೀನು ಬೇರೆಯವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ತನ್ನೊಂದಿಗೂ ಸಂಬಂಧ ಬೆಳೆಸಬೇಕೆಂದು ಒತ್ತಾಯಿಸಿದ್ದಾನೆ. ತನ್ನೊಂದಿಗೆ ಸಂಬಂಧ ಬೆಳೆಸದಿದ್ದರೆ, ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದು, ಇದರಿಂದ ಮನನೊಂದ ಬಾಲಕಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ತೀವ್ರ ಸುಟ್ಟಗಾಯಗಳಿಂದ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.