ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಕೇಂದ್ರ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 2 ರಷ್ಟು ಹೆಚ್ಚಳ ಮಾಡಿದೆ.
50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 50 ಲಕ್ಷ ನಿವೃತ್ತ ನೌಕರರು ಇದರ ಲಾಭ ಪಡೆಯಲಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಜುಲೈ 1, 2016 ರಿಂದ ಅನ್ವಯವಾಗುವಂತೆ ನೌಕರರ ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳವಾಗಲಿದೆ. ಕೇಂದ್ರ ನೌಕರರ ಸಂಘ ಶೇಕಡಾ 3ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವಂತೆ ಒತ್ತಾಯಿಸಿತ್ತು. ಆದ್ರೆ ಕೇಂದ್ರ ಸರ್ಕಾರ ಶೇಕಡಾ 2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ.