ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ. ದೇವಾಲಯದಲ್ಲೇ ಕಾಮುಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬೆಂಗಳೂರು ಇಂದಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೇವಾಲಯವೊಂದರಲ್ಲಿ ಅರ್ಚಕನಾಗಿರುವ ವಿಜಯಕುಮಾರ್ ಎಂಬಾತನೇ ಇಂತಹ ಕೃತ್ಯ ಎಸಗಿದ ಆರೋಪಿ. ದೇವಾಲಯದ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ದೇವಾಲಯದ ಹಿಂಭಾಗಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿ ಕಾಣಿಸದಿದ್ದಾಗ ತಾಯಿ ಹುಡುಕಾಡಿದ್ದು, ದೇವಾಲಯದ ಹಿಂಭಾಗದಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಪ್ರಶ್ನಿಸಿದ್ದಾರೆ. ಆಗ ಬಾಲಕಿ, ಅರ್ಚಕ ಎಸಗಿದ ನೀಚ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದು, ತಾಯಿ, ಇಂದಿರಾ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾ ನಗರ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.