ಬೆಂಗಳೂರು: ರಾಜ್ಯದಲ್ಲೇ ತಲ್ಲಣ ಮೂಡಿಸಿದ್ದ, ಬಿ.ಪಿ.ಓ. ಉದ್ಯೋಗಿ ಪ್ರತಿಭಾ ಅವರ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಕ್ಯಾಬ್ ಚಾಲಕನಿಗೆ, ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಪ್ರತಿಭಾ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ, ಕ್ಯಾಬ್ ಚಾಲಕ ಶಿವಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಇದನ್ನು ಹೈಕೋರ್ಟ್ ಖಾಯಂಗೊಳಿಸಿದೆ. ಹೈಕೋರ್ಟ್ ನ್ಯಾಯಮೂರ್ತಿಗಳಾದ ಹೆಚ್. ಬಿಲ್ಲಪ್ಪ ಮತ್ತು ಕೆ.ಎನ್. ಫಣೀಂದ್ರ ಅವರನ್ನೊಳಗೊಂಡ ವಿಭಾಗೀಯ ಪೀಠ, ಶಿವಕುಮಾರ್ ಜೀವಾವಧಿ ಶಿಕ್ಷೆ ರದ್ದು ಮಾಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.
2005 ರ ಡಿಸೆಂಬರ್ 13 ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಪ್ರತಿಭಾ ಅವರನ್ನು, ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಶಿವಕುಮಾರ್ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. 2010ರಲ್ಲಿ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.