ತುಮಕೂರು: ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು, ಅತ್ಯಾಚಾರ ಎಸಗಿದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮನೆಯ ಸಮೀಪ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋದ ನವಾಜುದ್ದೀನ್ ಎಂಬಾತ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮನೆಗೆ ಬಂದ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದು, ಅವರು, ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಹೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊದಲಿಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಾದರೂ, ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ ದೂರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪೊಕ್ಸೊ ಕಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಬಾಲಕಿಗೆ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಆರೋಪಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.