ವಿಶ್ವ ಬಾಕ್ಸಿಂಗ್ ರಂಗದ ದಂತಕತೆ ಎಂದೇ ಕರೆಯಲ್ಪಡುತ್ತಿದ್ದ ಖ್ಯಾತ ಬಾಕ್ಸಿಂಗ್ ಪಟು ಮಹಮ್ಮದ್ ಅಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಇದ್ದ ಕಾರಣ ಅವರನ್ನು ಅಮೆರಿಕದ ಆರಿಜೋನಾ ಪ್ರಾಂತ್ಯದಲ್ಲಿರುವ ಫಿಯೋನಿಕ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಮಹಮ್ಮದ್ ಅಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮಹಮ್ಮದ್ ಅಲಿ ಬಾಕ್ಸಿಂಗ್ ರಂಗದಲ್ಲಿ ಮಹತ್ತರ ಸಾಧನೆ ಮಾಡಿದ್ದು, 3 ಬಾರಿ ಬಾಕ್ಸಿಂಗ್ ಹೆವಿ ವೇಯ್ಟ್ ಚಾಂಪಿಯನ್ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಪಾರ್ಕಿನ್ ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ನಿರಂತರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆ ಫಲಕಾರಿಯಾದೇ ಅವರು ಮೃತಪಟ್ಟಿದ್ದಾರೆ. ಮಹಮ್ಮದ್ ಆಲಿ ಬಾಕ್ಸಿಂಗ್ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಬರೋಬ್ಬರಿ 3 ಸಲ ವಿಶ್ವ ಹೆವಿ ವೇಯ್ಟ್ ಬಾಕ್ಸಿಂಗ್ ಚಾಂಪಿಯನ್ ಆಗಿ ಅವರು ಹೊರಹೊಮ್ಮಿದ್ದರು.