ಕುಂದಾಪುರ: ಪ್ರೀತಿಸುವ ನಾಟಕವಾಡಿ ಹೆಣ್ಣುಮಕ್ಕಳನ್ನು ವಂಚಿಸಿದ ಹಲವಾರು ಘಟನೆಗಳು ನಡೆದಿವೆ. ದುರುಳರ ವಂಚನೆಯನ್ನು ಅರಿಯದೇ ಪ್ರೀತಿಯ ಬಲೆಯಲ್ಲಿ ಸಿಲುಕುವ ಯುವತಿಯರು ಸಂಕಷ್ಟ ಅನುಭವಿಸುತ್ತಾರೆ.
ಹೀಗೆ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿದ ದುರುಳನೊಬ್ಬ, ಆಕೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಪೋಸ್ಟ್ ಮಾಡಿದ ಘಟನೆ ವರದಿಯಾಗಿದೆ. ಕುಂದಾಪುರ ತಾಲ್ಲೂಕಿನ ಸಿದ್ಧಾಪುರದಲ್ಲಿ ಈ ಘಟನೆ ನಡೆದಿದೆ. ಯುವತಿಯೊಂದಿಗೆ ಸಲುಗೆಯಿಂದ ಇದ್ದ ಯುವಕ ಪ್ರೀತಿಸುವ ನಾಟಕವಾಡಿದ್ದು, ನಂತರ ಆಕೆಯ ಅಶ್ಲೀಲ ಚಿತ್ರಗಳನ್ನು ತೆಗೆದು ಅದನ್ನು ವಾಟ್ಸಾಪ್ ನಲ್ಲಿ ಹಾಕಿದ್ದಾನೆ ಎನ್ನಲಾಗಿದೆ.
ಯುವತಿ ಶಂಕರನಾರಾಯಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಪತ್ತೆಯಾಗಿರುವ ಯುವಕನ ಪತ್ತೆಗೆ ಬಲೆ ಬೀಸಿದ್ದಾರೆ. ಆತನಿಗೆ ನೆರವಾದ ಸ್ನೇಹಿತನ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.