ನ್ಯಾಯಾಲಯದ ಆದೇಶದಂತೆ ಈಗಾಗಲೇ ದೇಶಾದ್ಯಂತ ದ್ವಿ ಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರರೂ ಹೆಲ್ಮೆಟ್ ಧರಿಸಬೇಕೆಂಬ ನಿಯಮವಿದ್ದರೂ ಬಹುತೇಕರು ಅದನ್ನು ಪಾಲಿಸುತ್ತಿಲ್ಲ. ಇಂತವರಿಗಾಗಿ ಈಗ ಹೊಸ ನಿಯಮವೊಂದು ಜಾರಿಯಾಗುತ್ತಿದೆ.
ಈಗಾಗಲೇ ದೇಶದ ಹಲವು ನಗರಗಳಲ್ಲಿ ಹೆಲ್ಮೆಟ್ ಧರಿಸದ ದ್ವಿ ಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಕಬಾರದೆಂಬ ನಿಯಮ ಜಾರಿಗೆ ತರಲಾಗಿದ್ದು, ಈಗ ಕಟಕ್ ನಲ್ಲಿ ಜುಲೈ 1 ರಿಂದ ಈ ನಿಯಮ ಜಾರಿಯಾಗುತ್ತಿದೆ. ಈ ಕುರಿತು ಈಗಾಗಲೇ ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ಜುಲೈ 1 ರಿಂದ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.
ಅಪಘಾತ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದ ಕಾರಣಕ್ಕಾಗಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಆದರೂ ಹೆಲ್ಮೆಟ್ ಧರಿಸುವ ಕುರಿತು ನಿರಾಸಕ್ತಿ ತೋರಿಸುತ್ತಿರುವ ಕಾರಣ, ಅಂತವರ ವಾಹನಗಳಿಗೆ ಪೆಟ್ರೋಲ್ ಹಾಕದಿರುವ ಮೂಲಕ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ದೇಶದ ಇತರೆ ನಗರಗಳಲ್ಲೂ ಇದೇ ಕ್ರಮ ಅನುಸರಿಸಲಾಗುವುದು ಎನ್ನಲಾಗಿದೆ.