70 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದು, ಆತನ ವಿರುದ್ದ ಈಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದಿನ ಮಾದಾಪುರ ನಿವಾಸಿ ಎಂ. ಸೋಮಿ ರೆಡ್ಡಿ ಎಂಬಾತ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಮೇಲೆ ಈ ಹಿಂದೆ ಎರಡು ಬಾರಿ ಅತ್ಯಾಚಾರವೆಸಗಿದ್ದನೆನ್ನಲಾಗಿದೆ. ಜೂನ್ 10 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಮತ್ತೇ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಆತನಿಂದ ತಪ್ಪಿಸಿಕೊಂಡ ಮಹಿಳೆ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಾದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿರುವ ಪೊಲೀಸರು, ಆಕೆಯ ದೂರಿನಂತೆ ವಿವಿಧ ಕಲಂ ಗಳಡಿ ವೃದ್ದ ಸೋಮಿ ರೆಡ್ಡಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.