ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದಲೇ ಎಲೆಕ್ಟ್ರಾನಿಕ್ ಸಿಗರೇಟ್ ಬ್ಯಾನ್ ಮಾಡಲಾಗಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಿಗರೇಟ್ ಮಾರಾಟ, ತಯಾರಿಕೆ, ವಿತರಣೆ ನಿಷೇಧಿಸಲಾಗಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಅಲ್ಲದೇ, ಎಲೆಕ್ಟ್ರಾನಿಕ್ ಸಿಗರೇಟ್ ಆಮದು, ಜಾಹೀರಾತು ಕೂಡ ನಿಷೇಧಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಆನ್ ಲೈನ್ ನಲ್ಲಿಯೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಿಗರೇಟ್ ಮಾರದಂತೆ ನಿರ್ಬಂಧ ಹೇರಲಾಗಿದೆ ಒಂದು ವೇಳೆ ಯಾರಾದರೂ ಸಿಗರೇಟ್ ಮಾರಾಟ ಮಾಡುವುದು ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಇದರೊಂದಿಗೆ ಎಲ್ಲಾ ರೀತಿಯ ಬೀಡಿ, ಸಿಗರೇಟ್ ನಿಷೇಧಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಯಾರಾದರೂ ಎಲೆಕ್ಟ್ರಾನಿಕ್ ಸಿಗರೇಟ್ ಉತ್ಪಾದನೆ, ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ 104 ಕ್ಕೆ ಕರೆ ಮಾಡಿ ತಿಳಿಸುವಂತೆ ಅವರು ಮನವಿ ಮಾಡಿದ್ದಾರೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಸಿಗರೇಟ್ ಟ್ರೆಂಡಿಯಾಗಿದ್ದು, ಬಹುತೇಕರು ಸಾಮಾನ್ಯ ಸಿಗರೇಟ್ ಬದಲಿಗೆ ಎಲೆಕ್ಟ್ರಾನಿಕ್ ಸಿಗರೇಟ್ ಮೊರೆ ಹೋಗಿದ್ದರು.