Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

$
0
0

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಹೋಟೆಲ್ ಒಂದರಲ್ಲಿ ಔತಣಕೂಟ ಆಯೋಜಿಸಿದ್ದು, ಈ ವೇಳೆ ಎಂಟು ಜನ ಗ್ರಾಮ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ.

ಗ್ರಾಮ ಪಂಚಾಯತಿ ಸದಸ್ಯರಾದ ಧನಪಾಲ್, ದಶರಥ್, ಶ್ರೀಧರ್, ವೆಂಕಟರಮಣ ಮೊದಲಾದವರ ಮೇಲೆ ಹಲ್ಲೆ ಮಾಡಲಾಗಿದೆ. ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವಿಕಿಶೋರ್ ಬೆಂಬಲಿಗರನ್ನು ಕಡೆಗಣಿಸಿದ ಆರೋಪದ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.

ರವಿಕಿಶೋರ್, ಆಕಾಶ್, ಪವನ್, ಕಿಶೋರ್, ಕಾರ್ತಿಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

The post ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ first appeared on Kannada Dunia | Kannada News | Karnataka News | India News.

Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>