
ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.
ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸದ ಮಾತ್ರಕ್ಕೆ ಹಣ ಜಮೆ ಆಗಲ್ಲ, ತಪ್ಪದೇ ನೀವು ಈ ಕೆಲಸ ಮಾಡಬೇಕು .
ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೂ ಈ ಕೆಲಸ ಮಾಡದಿದ್ದರೆ ಅವರು ಯೋಜನೆಯಿಂದ ವಂಚಿತರಾಗಬಹುದು. ಯಾಕೆಂದರೆ ಯಜಮಾನಿಯರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.
ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರು ಅರ್ಜಿ ಸಲ್ಲಿಸಲು ಇನ್ನು ಮುಂದೆ ಸ್ಲಾಟ್ ಬುಕ್ಕಿಂಗ್ ಗಾಗಿ SMS ಅನ್ನು ಕಾಯುವ ಅವಶ್ಯಕತೆ ಇಲ್ಲ. ಬದಲಾಗಿ ನೇರವಾಗಿಯೇ ಹೋಗಿ ಫಲಾನುಭವಿಗಳು ತಮಗೆ ಹತ್ತಿರದಲ್ಲಿರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಿನ್ನೆ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಒಂದು ವಾರದಲ್ಲೇ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 70 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿಕೊಂಡಂತಾಗಿದೆ. ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 26 ರ ಬುಧವಾರ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ 70 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾದಂತಾಗಿದೆ ಎಂದು ವರದಿಯಾಗಿದೆ.
The post `ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ first appeared on Kannada Dunia | Kannada News | Karnataka News | India News.