
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ.
ಮಾಜಿ ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಇಂದು ಗೌರವಾನ್ವಿತ ಮುರಳಿ ಮನೋಹರ್ ಜೋಶಿ ಜಿ ಅವರಿಂದ ಮಾರ್ಗದರ್ಶನ ಮತ್ತು ಆಶೀರ್ವಾದ ಸಿಕ್ಕಿದೆ. ನನ್ನಂತಹ ಪ್ರತಿಯೊಬ್ಬ ಕಾರ್ಯಕರ್ತನೂ ಅವರನ್ನು ಭೇಟಿಯಾದ ನಂತರ ಯಾವಾಗಲೂ ಹೊಸ ಶಕ್ತಿಯನ್ನು ಪಡೆಯುತ್ತಾನೆ ಎಂದು ಬರೆದುಕೊಂಡಿದ್ದಾರೆ.
The post ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ first appeared on Kannada Dunia | Kannada News | Karnataka News | India News.