
ಬೆಂಗಳೂರು: ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ಸಂರಕ್ಷಣೆಗೆ ಡಾ.ಕೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ನೀತಿ ಚೌಕಟ್ಟು ಕುರಿತ ಅಂತರ ರಾಜ್ಯ ಸಚಿವರ ಸಂವಾದ: ಪಶ್ಚಿಮ ಘಟ್ಟಗಳ ವೈವಿಧ್ಯತೆಯ ಸಂರಕ್ಷಣೆಗೆ ವೇಗವರ್ಧನೆ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದರು.
ಪಶ್ಚಿಮ ಘಟ್ಟಗಳು ಅಸಾಧಾರಣ ಅಪರೂಪದ ಜೀವವೈವಿಧ್ಯತೆಯೊಂದಿಗೆ ಅತ್ಯುತ್ತಮ ಸಾರ್ವತ್ರಿಕ ಮೌಲ್ಯದ ಪ್ರದೇಶಗಳಾಗಿವೆ. ಇವುಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಘಟ್ಟಗಳ ಬಹುತೇಕ ಭಾಗವನ್ನು ಕರ್ನಾಟಕ ಹಂಚಿಕೊಂಡಿದ್ದು, ಭೌಗೋಳಿಕ ಪ್ರದೇಶಗಳಲ್ಲಿ 11 ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರ ಹಿತಾಸಕ್ತಿ ಕಾಪಾಡಲಾಗುವುದು. ಕಸ್ತೂರಿರಂಗನ್ ಸಮಿತಿ ವರದಿ ಕಳೆದ 10 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕರ್ನಾಟಕ ನೆರೆಹೊರೆಯ 6 ರಾಜ್ಯಗಳು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲಾಗುತ್ತದೆ. ಕರ್ನಾಟಕ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಗೋವಾ ಪಶ್ಚಿಮ ಘಟ್ಟಗಳು ಅಂತರ ರಾಜ್ಯ ಶ್ರೇಣಿಯಾಗಿರುವುದರಿಂದ ಸಂರಕ್ಷಣಾ ಕಾರ್ಯಗಳನ್ನು ಸಮನ್ವಯಗೊಳಿಸಿ ಜಾರಿಗೊಳಿಸಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.
The post ಪಶ್ಚಿಮ ಘಟ್ಟ, ಜೀವ ವೈವಿಧ್ಯ ರಕ್ಷಣೆಗೆ ಕಸ್ತೂರಿರಂಗನ್ ವರದಿ ಜಾರಿ first appeared on Kannada Dunia | Kannada News | Karnataka News | India News.