
ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉಂಧಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿಯಾಗಿ ತಮ್ಮ ಪುತ್ರ ಜಯ್ ಶಾ ಅವರ ಸ್ಥಾನದ ಬಗ್ಗೆ ಪ್ರಶ್ನಿಸಿದ್ದಾರೆ.
ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ ಅವರು ರಾಜವಂಶದ ರಾಜಕೀಯದ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ಮಿತ್ರಪಕ್ಷಗಳು ರಾಜವಂಶದ ರಾಜಕೀಯವನ್ನು ಉತ್ತೇಜಿಸುತ್ತಿದ್ದಾರೆ. ಡಿಎಂಕೆ ರಾಜವಂಶದ ಪಕ್ಷ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ಡಿಎಂಕೆ ಯುವ ಘಟಕದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಉದಯನಿಧಿ, ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾದೆ, ಸಚಿವ ಸ್ಥಾನ ಪಡೆದೆ ಎಂದು ಪ್ರತಿಪಾದಿಸಿದರು.
ನನ್ನನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಪಕ್ಷದ ನಾಯಕರ ಗುರಿ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾ ಅವರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಜಯ್ ಶಾ ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಎಷ್ಟು ರನ್ ಗಳಿಸಿದ್ದಾರೆ? ಎಂದು ಅವರು ಪ್ರಶ್ನಿಸಿದ್ದು, ಉತ್ತರ ನೀಡುವಂತೆ ಒತ್ತಾಯಿಸಿದ್ದಾರೆ.
The post ‘ನಿಮ್ಮ ಮಗ ಎಷ್ಟು ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ?’ ಅಮಿತ್ ಶಾ ವಿರುದ್ಧ ತಮಿಳುನಾಡು ಸಚಿವ ವಾಗ್ದಾಳಿ first appeared on Kannada Dunia | Kannada News | Karnataka News | India News.